ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದು, ಮನನೊಂದ ಯುವತಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಕುಂದಗೋಳ ಪಟ್ಟಣದ ಸಿರಾಜ್ ಎಂಬಾತ ಕಿರುಕುಳ ನೀಡಿದ್ದಾನೆ.ಇಲ್ಲಿನ ವಿದ್ಯಾನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಯುವತಿಗೆ ಸಿರಾಜ್ ಪ್ರೀತಿ ಹೆಸರಿನಲ್ಲ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಅಲ್ಲದೇ ಆಕೆಯ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ.
ಯುವತಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ರಂಜಾನ್ ಹಬ್ಬದಂದು ನಗರದಲ್ಲಿ ಮಾರಣಾಂತಿಕವಾಗಿ ಹಲ್ಲೆ ಕೂಡ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಸಿರಾಜ್ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಯತ್ನ ಮಾಡಿದ್ದು, ಸದ್ಯ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ.
ನೇಹಾ ಹಿರೇಮಠ ಕೊಲೆ ಪ್ರಕರಣ ನಡೆದು ಒಂದು ವರ್ಷದೊಳಗಾಗಿ ಮತ್ತದೇ ಅಂತದೇ ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಅಂದು ನೇಹಾ ಹಿರೇಮಠ ಕೊಲೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿ, ಪ್ರತಿಭಟನೆಗಳು ಸಹ ನಡೆದಿದ್ದವು, ಇದೀಗ ಮತ್ತೇ ಇಂತಹ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.