ಹುಬ್ಬಳ್ಳಿ: ಅವಳಿನಗರದಲ್ಲಿ ಮಾದಕ ವಸ್ತುಗಳ ಮಾರಾಟಗಾರರು ಹಾಗೂ ವ್ಯಸನಿಗಳನ್ನು ಪೊಲೀಸರು ಇಂದು ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.
ಹುಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸುಮಾರು 500 ಕ್ಕೂ ಹೆಚ್ಚು ವ್ಯಸನಿಗಳನ್ನು ವಶಕ್ಕೆ ಪಡೆದುಕೊಂಡು ಹುಬ್ಬಳ್ಳಿಯ ಕಿಮ್ಸ್ ಹಾಗೂ ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಲಾಯಿತು.
ಇನ್ನು ತಪಾಸಣೆಯಲ್ಲಿ ಸುಮಾರು 200ಕ್ಕೂ ಹೆಚ್ಚಿನ ವ್ಯಸನಿಗಳ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ಕರೆತಂದು ವ್ಯಸನಿಗಳ ಮೈಚಳಿ ಬಿಡಿಸಿದ್ದಾರೆ. ಅಷ್ಟೇ ಅಲ್ಲದೆ ವ್ಯಸನಿಗಳ ಪೋಷಕರನ್ನು ಕರೆಯಿಸಿ ಪೋಲಿಸ್ ಕಮಿಷನರ್ ಎನ್ ಶಶಿಕುಮಾರ ಸಮಾಲೋಚನೆ ನಡೆಸಿದರು. ಇನ್ನು ಈ ವೇಳೆ ಅವಳಿನಗರದ 15 ಕ್ಕೂ ಹೆಚ್ಚು ಪೋಲಿಸ್ ಠಾಣೆಗಳ ಇನ್ಸ್ಪೆಕ್ಟರ್ ಗಳು ಹಾಗೂ ಸಿಬ್ಬಂದಿಗಳು ಭಾಗಿಯಾಗಿದ್ದರು.
ಇನ್ನು ಮಾದಕ ವ್ಯಸನಿಗಳಿಗೆ ಮನೋವೈದ್ಯ ಹಾಗೂ ಡಿ-ಅಡ್ಡಿಕ್ಷನ್ ಸ್ಪೆಷಲಿಸ್ಟ್ ಡಾಕ್ಟರ್ ಸುಧೀಂದ್ರ ಹುದ್ದಾರ್ ಅವರಿಂದ ಗಾಂಜಾ, ಡ್ರಗ್ಸ್ ಸೇವನೆಯಿಂದ ಆಗುವ ದುಷ್ಟಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.