ಮನೆ ಮುಂದೆ ಕುಳಿತಿದ್ದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದು ಪರಾರಿಯಾದ ಘಟನೆ ಧಾರವಾಡ ತಾಲೂಕಿನ ಗರಗ ಪೋಲಿಸ್ ಠಾಣೆ ವ್ಯಾಪ್ತಿಯ ಕೊಟೂರ್ ಗ್ರಾಮದಲ್ಲಿ ನಡೆದಿದೆ.

ಶಂಕರಯ್ಯ ಹಿರೇಮಠ್ (65) ಕೊಲೆಯಾ ವ್ಯಕ್ತಿಯಾಗಿದ್ದಾನೆ. ಮನೆ ಮುಂದೆ ಕುಳಿತಿದ್ದ ಸಂದರ್ಭ ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಏಕಾಏಕಿ ಮಚ್ಚಿನಿಂದ ಒಂಬತ್ತಕ್ಕೂ ಹೆಚ್ಚು ಬಾರಿ ಚುಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಶವವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಬೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಘಟನೆ ಕುರಿತು ಗರಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.