ಧಾರವಾಡ: ಮಹಿಳೆ ಒಬ್ಬರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾವಿ ಒಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ನಗರದ ಚರಂತಿಮಠ ಓಣಿಯ ನಿವಾಸಿ ನೀಲವ್ವ ಬಸಪ್ಪ ವಾಡಿ (74) ಸಾವನ್ನಪ್ಪಿದ ಮಹಿಳೆ. ದಿನಾಂಕ 27 ರಂದು ಮನೆಯಿಂದ ಹೋಗಿ ನಾಪತ್ತೆಯಾಗಿರುವ ಬಗ್ಗೆ ಅವರ ಮಗ ಗುರುಸಿದ್ದಪ್ಪ ವಾಡಿ ಶಹರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇಂದು ಈ ಮಹಿಳೆ ಬಾವಿ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ವ್ಯಕ್ತವಾಗಿದೆ.

ಸದ್ಯ ಮೃತದೇಹವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ, ಈ ಕುರಿತು ಶಹರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.