ಧಾರವಾಡ: ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಧಾರವಾಡ ಸಬ್ ಅರ್ಬನ್ ಪೋಲಿಸ್ ಠಾಣೆ ವ್ಯಾಪ್ತಿಯ ಎತ್ತಿನಗುಡ್ಡ ಬಳಿ ಇಂದು ಸಂಜೆ ನಡೆದಿದೆ.
ನಾರಾಯಣ್ ಇಲಿಗಾರ್ (59) ಕೊಲೆಯಾದ ದುರ್ದೈವಿ. ಹಳೇ ವೈಷಮ್ಯ ಅಥವಾ ಆಸ್ತಿ ವಿಚಾರಕ್ಕೆ ಕೊಲೆ ಮಾಡಿರುವುದಾಗಿ ಅನುಮಾನ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ದೇಹದ ಎದೆ ಭಾಗ ಹಾಗೂ ಕಾಲುಗಳ ಮೇಲೆ ಬರ್ಬರವಾಗಿ ಹಲ್ಲೆ ಮಾಡಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೃತ್ಯ ಎಸಗಿ ದುಷ್ಕರ್ಮಿಗಳು ಪರಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಸಬ್ ಅರ್ಬನ್ ಪೋಲಿಸ್ ಠಾಣೆಯ ಪೊಲೀಸರು ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇದು ಕೊಲೆಯೋ ಅಥವಾ ಬೇರೆ ಯಾವ ಕಾರಣಕ್ಕೆ ವ್ಯಕ್ತಿಯು ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಕಲೆ ಹಾಕುತ್ತಿದ್ದು, ತನಿಖೆ ಬಳಿಕವೇ ಸತ್ಯಾಸತ್ಯತೆ ತಿಳಿದು ಬರಬೇಕಿದೆ.