ಹುಬ್ಬಳ್ಳಿ ಆನಂದನಗರದಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ಘಟನೆಯಲ್ಲಿ ಮೂರು ವರ್ಷದ ಬಾಲಕಿ ಅಲಿಜಾ ಕುಡಚಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾಳೆ.
ಅಲ್ತಾಫ್ ತೋರಗಲ್ ಎಂಬ ಯುವಕ ಕಾರು ಚಾಲನೆ ಮಾಡುತ್ತಿದ್ದ ವೇಳೆ, ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಅಲಿಜಾ ಮೇಲೆ ಕಾರು ಹರಿದಿದೆ. ಗಂಭೀರ ಗಾಯಗೊಂಡ ಬಾಲಕಿಯನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಸಾವನ್ನು ದೃಢಪಡಿಸಿದ್ದಾರೆ.

ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿದ್ದಾರೆ.
ಈ ಘಟನೆಯಿಂದ ಆನಂದನಗರ ಪ್ರದೇಶದಲ್ಲಿ ದುಃಖದ ಮಡುಬಿದ್ದಿದ್ದು, ಸಾರ್ವಜನಿಕರು ಅಜಾಗೃತ ಚಾಲನೆ ವಿರುದ್ಧ ಕಿಡಿಕಾರಿದ್ದಾರೆ.