ಧಾರವಾಡ : ಆಸ್ತಿ ವಿಚಾರ ಹಿನ್ನಲೆಯಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಧಾರವಾಡದ ನವಲೂರು ಗ್ರಾಮದ ವಿಠ್ಠಲ ಮಂದಿರದ ಬಳಿ ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ.
ನವಲೂರು ಗ್ರಾಮದ ನಿವಾಸಿ ಕರೆವ್ವಾ ಇರಬಗೇರಿ ಎಂಬ ಮಹಿಳೆಯೇ ಸಾವನ್ನಪ್ಪಿದ ದುರ್ದೈವಿ.
ಆಸ್ತಿ ವಿಚಾರವಾಗಿ ಮಹಿಳೆಯನ್ನು ಆಕೆಯ ಸಂಬಂಧಿಕರು ಬರ್ಬರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕೊಲೆಯಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಕುರಿತಂತೆ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.