ಧಾರವಾಡ: ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ಯುವಕನೋರ್ವನ ಶವ ಅನುಮಾನಸ್ಪದವಾಗಿ ಪತ್ತೆಯಾದ ಘಟನೆ ಧಾರವಾಡದ ಕೆಲಗೇರಿ ಬಳಿ ನಡೆದಿದೆ.
ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾದ ಇಲ್ಲಿನ ಸಾಧನಕೇರಿಯ ನಿವಾಸಿ ಚೇತನ್ ಶರಣಪ್ಪ ತೊಂಡಿಹಾಳ (23) ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.
ವಿದ್ಯಾರ್ಥಿಯಾಗಿದ್ದ ಈತ ಕಳೆದ ೪ ವರ್ಷಗಳಿಂದ ಅಸ್ವಸ್ಥನಾಗಿದ್ದ ಎಂದು ತಿಳಿದು ಬಂದಿದ್ದು, ನಿನ್ನೆ ಮನೆಯಿಂದ ಹೊರಗೆ ಹೋಗಿ ನಾಪತ್ತೆಯಾಗಿದ್ದ ಆದರೇ ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ.
ಯುವಕನ ಸಾವಿಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ ತನಿಖೆ ಬಳಿಕವಷ್ಟೇ ಸತ್ಯಾಂಶ ಹೊರಬರಲಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಕುರಿತೆ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.