ಹುಬ್ಬಳ್ಳಿ:ಅಪರಿಚಿತ ವಾಹನವೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಭೀಕರವಾಗಿ ಸಾವನ್ನಪ್ಪಿದ ಘಟನೆ ಹು-ಧಾ ಬೈಪಾಸ್ ಬಳಿಯ ನೇಕಾರನಗರದ ಟೋಲ್ ಗೇಟ್ ಬಳಿ ಈಗಷ್ಟೇ ನಡೆದಿದೆ.
ಗಬ್ಬೂರ ಬೈಪಾಸ್ ನಿಂದ ಧಾರವಾಡಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಭೀಕರವಾಗಿ ಸಾವನ್ನಪ್ಪಿದ ವ್ಯಕ್ತಿ ಹಾಗೂ ಡಿಕ್ಕಿಪಡಿಸಿದ ವಾಹನದ ಮಾಹಿತಿಯು ತನಿಖೆ ಬಳಿಕ ಗೊತ್ತಾಗಲಿದೆ.
ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.