ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ರಕ್ತ ಹರಿದಿದ್ದು, ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ. ಪರಿಣಾಮ ಯುವಕ ಸಾವನ್ನಪ್ಪಿದ್ದಾನೆ.
ಬೆಂಗೇರಿಯ ನಾಗಶೆಟ್ಟಿಕೊಪ್ಪದ ನಿವಾಸಿಯಾಗಿರುವ ಪ್ರಕಾಶ ಮಾನೆ ಎಂಬಾತನೇ ಮೃತಪಟ್ಟಿದ್ದು, ಈತನಿಗೆ ಬೆಂಗೇರಿಯ ಹನುಮಂತ ದೇವಸ್ಥಾನದ ಬಳಿಯಲ್ಲಿ ಸ್ನೇಹಿತರಾದ ಕಿರಣ ಬಡಿಗೇರ ಹಾಗೂ ಸಂಗಮೇಶ ( ಸಂಗಪ್ಪ ಮೆಡ್ಲೇರಿ ) ಚಾಕುವಿನಿಂದ ಚುಚ್ಚಿ ಬರ್ಭರವಾಗಿ ಹತ್ಯೆ ಮಾಡಿದ್ದಾರೆ.
ಪ್ರಕಾಶನಿಗೆ ಚಾಕು ಇರಿತವಾದ ತಕ್ಷಣ ಸ್ಥಳೀಯರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಿದರು, ಆದರೆ ಹೊಟ್ಟೆ ಬಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿ ಅತಿಯಾದ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೇ ಪ್ರಕಾಶ ಸಾವನ್ನಪ್ಪಿದ್ದಾನೆ.
ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರ ಆಕ್ರಂಧನ ಮುಗಿಲು ಮುಟ್ಟಿದೆ.
ಈ ಘಟನೆಗೆ ಕಾರಣವೇನು ಎಂಬುವುದು ತಿಳಿದುಬಂದಿಲ್ಲ. ಈಗಾಗಲೇ ಸ್ಥಳಕ್ಕೆ ಕೇಶ್ವಾಪುರ ಪೋಲಿಸ್ ಠಾಣೆಯ ಸಿಬ್ಬಂದಿಗಳು ಆಗಮಿಸಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಕರ್ನಾಟಕ ಪಬ್ಲಿಕ್ ವಾಯ್ಸ್
ಹುಬ್ಬಳ್ಳಿ