ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಮಾರಾಮಾರಿ ನಡೆದಿದ್ದು, ಓರ್ವನಿಗೆ ಗಂಭೀರವಾಗಿ ಗಾಯಗಳಾದ ಘಟನೆ ಧಾರವಾಡದ ವಿದ್ಯಾಗಿರಿಯ ಫುಡ್ ಐಸ್ಲ್ಯಾಂಡ್ ಹತ್ತಿರ ನಡೆದಿದೆ.
ಘಟನೆಯಲ್ಲಿ ರೈಸ್ ಮುಲ್ಲಾ ಎಂಬಾನಿಗೆ ಗಾಯಗಳಾಗಿದ್ದು, ಸದ್ಯ ಗಾಯಗೊಂಡವನನ್ನು ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸದ್ಯ ಘಟನಾ ಸ್ಥಳಕ್ಕೆ ಧಾರವಾಡದ ವಿದ್ಯಾಗಿರಿ ಪೋಲಿಸ ಠಾಣೆಯ ಸಿಬ್ಬಂದಿಗಳು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಮಾರಾಮಾರಿ ನಡೆದಿದೆ? ಯಾರು ಯಾರು ಹಲ್ಲೆ ಮಾಡಿದ್ದಾರೆ? ಎಂಬ ಮುಂತಾದ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.