ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವತಿಯಿಂದ ಬಕ್ರೀದ್ ಹಬ್ಬದ ಪೂರ್ವಭಾವಿ ಸಭೆ ಹಾಗೂ ಜನ ಸಂಪರ್ಕ ಸಭೆಯನ್ನು ನಗರದ ಆನಂದನಗರದ ವೆಲ್ ಕಮ್ ಹಾಲ್ ನಲ್ಲಿ ಭಾನುವಾರ ಸಂಜೆ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ದಕ್ಷಿಣ ವಿಭಾಗದ ಎಸಿಪಿ ಉಮೇಶ ಚಿಕ್ಕಮಠ ಹಾಗೂ ಠಾಣೆಯ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು, ಹಿಂದೂ-ಮುಸ್ಲಿಂ ಭಾವೈಕ್ಯತೆಯ ಬಕ್ರೀದ್ ಹಬ್ಬವನ್ನು ಶಾಂತ ರೀತಿಯಿಂದ ಆಚರಿಸಬೇಕೆಂದು ಸಭೆಯಲ್ಲಿ ನೆರೆದಿದ್ದ ಸಭಿಕರಿಗೆ ಕರೆ ನೀಡಿದರಲ್ಲದೇ ಅವಳಿ ನಗರದಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಅಂತಹ ಅಪರಾಧಗಳೇನಾದರೂ ಕಂಡು ಬಂದಲ್ಲಿ ತಕ್ಷಣವೇ ಠಾಣೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಹು-ಧಾ ಪಾಲಿಕೆ ಸದಸ್ಯ ಆರೀಫ್ ಭದ್ರಾಪೂರ, ಹಳೇ ಹುಬ್ಬಳ್ಳಿ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿಗಳು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.