ಹುಬ್ಬಳ್ಳಿ: ವ್ಯಕ್ತಿಯೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯ ಹುಬ್ಬಳ್ಳಿಯ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ಪತ್ತೆಯಾಗಿದೆ.
ಹುಬ್ಬಳ್ಳಿ ತಾಲೂಕಿನ ರೇವಡಿಹಾಳ ಗ್ರಾಮದ ಫಕ್ಕಿರೇಶ್ ಎಂಬ ವ್ಯಕ್ತಿಯೇ ಶವವಾಗಿ ಪತ್ತೆಯಾಗಿದ್ದು, ಶುಕ್ರವಾರದಂದು ಗ್ರಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆಯೇ? ಎಂಬ ಶಂಕೆ ವ್ಯಕ್ತವಾಗಿದೆ.
ಮಾಹಿತಿ ಲಭ್ಯವಾಗುತ್ತಿದ್ದಂತೆ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಕುರಿತು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.