ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳು ಹಾಗೂ ಗಾಂಜಾ, ಡ್ರಗ್ಸ್ ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹು-ಧಾ ನೂತನ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ಡ್ರಗ್ಸ್ ಪೆಡ್ಲರ್ ಗಳಿಗೆ ನಗರದ ಹಳೇ ಸಿಆರ್ ಮೈದಾನದಲ್ಲಿ ಪರೇಡ್ ನಡೆಸಲಾಯಿತು.
ಹು-ಧಾ ಅವಳಿನಗರದಲ್ಲಿ ಅಪರಾಧ ಕೃತ್ಯಗಳು ಹೆಚ್ಚಳ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಹು-ಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 180 ಕ್ಕೂ ಹೆಚ್ಚು ಡ್ರಗ್ಸ್ ಪೆಡ್ಲರ್ ಗಳಿಗೆ ಕಮೀಷನರ್ ಬಿಸಿ ಮುಟ್ಟಿಸಿದ್ದಾರೆ.
ಯಾವುದೇ ಅಪರಾಧ ಕೃತ್ಯಗಳಿಗೆ ಭಾಗಿಯಾಗದೇ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಿ ಹಾಗೂ ಸಾರ್ವಜನಿಕರಿಗೆ ಉಪಟಳ ನೀಡುವಂತಹ ಕೆಲಸಕ್ಕೆ ಮುಂದಾಗಬೇಡಿ, ಇದೆಲ್ಲವನ್ನು ಬಿಟ್ಟು ಕಾನೂನು ಮೀರಿ ವರ್ತಿಸಿದರೇ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಕಾನೂನು ಸುವ್ಯವಸ್ಥೆ ಡಿಸಿಪಿ ಬಿ.ಎಸ್.ನಂದಗಾವಿ, ಕ್ರೈಂ ಡಿಸಿಪಿ ರವೀಶ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.