ಹುಬ್ಬಳ್ಳಿ: ಜೂಜಾಟದಲ್ಲಿ ತೊಡಗಿದ್ದ 10 ಜನರನ್ನು ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಜೂಜಾಟವಾಡುತ್ತಿದ್ದವರ ಮೇಲೆ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ಜೂಜಾಟದಲ್ಲಿ ತೊಡಗಿದ್ದವರನ್ನು ಹಾಗೂ 5670 ನಗದು, ಜೂಜಾಟದಲ್ಲಿ ಬಳಕೆ ಮಾಡಿದ ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರು ಕುಸುಗಲ್ ಗ್ರಾಮದ ನಿವಾಸಿಗಳಾಗಿದ್ದು, ಇವರ ಮೇಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.