ಹುಬ್ಬಳ್ಳಿ: ಬೈಕ್ ಹಾಗೂ ಟಾಟಾ ಎಎಸ್ ವಾಹನ ನಡುವೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಯರಗುಪ್ಪಿ ಗ್ರಾಮದ ಮಂಜುನಾಥ ಮಾಡೋಳ್ಳಿ ಎಂಬಾತ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ದುರ್ದೈವಿ.
ನಿನ್ನೆ ಶನಿವಾರ ರಾತ್ರಿ ಬೈಕ್ ಹಾಗೂ ಟಾಟಾ ಎಎಸ್ ನಡುವೆ ಅಪಘಾತ ಸಂಭವಿಸಿ ಗಂಭೀರವಾಗಿ ಬೈಕ್ ಸವಾರ ಮಂಜುನಾಥ ಗಾಯಗೊಂಡಿದ್ದ, ತಕ್ಷಣ ಸ್ಥಳೀಯರ ಸಹಾಯದಿಂದ ಕಿಮ್ಸ್ ಗೆ ದಾಖಲು ಮಾಡಲಾಗಿತ್ತಾದರೂ ಇಂದು ಭಾನುವಾರ ಬೆಳ್ಳಿಗ್ಗೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ನಿನ್ನೆ ಘಟನಾ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಡಿಸೋಜಾ, ಪಿಎಸ್ಐ ಪುನೀತ್ ಕುಮಾರ್ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಕುರಿತಂತೆ ಕೇಶ್ವಾಪೂರ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆದಿದೆ.