ಹುಬ್ಬಳ್ಳಿ: ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಹು-ಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ರೌಡಿಗಳ ಪರೇಡ್ ಸೋಮವಾರ ನಡೆಸಲಾಯಿತು.
ಹು-ಧಾ ಅವಳಿನಗರದ 15 ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 862 ರೌಡಿಗಳಿಗೆ ಫರೇಡ್ ನಡೆಸಲಾಯಿತು.
ಈ ವೇಳೆ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ನಿಮಿತ್ತವಾಗಿ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ಮುಲಾಜಿಲ್ಲದೆ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಹು-ಧಾ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಇನ್ನು ರೌಡಿ ಪರೇಡ್ ಗೆ ಗೈರು ಹಾಜರಿದ್ದವರಿಗೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲು ಆಯಾ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಗಳಿಗೆ ಸೂಚನೆ ನೀಡಿದ ಕಮಿಷನರ್.