ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಆರು ಜನ ಮಹಿಳೆಯರು ಸೇರಿದಂತೆ ಓರ್ವ ವ್ಯಕ್ತಿಗೆ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಬೆಳಗಲಿ ಕ್ರಾಸ್ ಬಳಿ ಟ್ರ್ಯಾಕ್ಟರ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ನಲ್ಲಿ ಎಂದಿನಂತೆ ಕೆಲಸಕ್ಕೆ ತೆರಳುವ ಸಮಯದಲ್ಲಿ ಹಿಬಂದಿಯಿಂದ ಬಂದ ಟ್ಯಾಂಕರ್, ಟ್ರ್ಯಾಕ್ಟರ್ ಗೆ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ನ ಟ್ರೇಲರ್ ಬೇರ್ಪಟ್ಟಿದೆ, ಟ್ರ್ಯಾಕ್ಟರ್ ನಲ್ಲಿ ಇದ್ದ ಶಾಂತವ್ವ, ಕಲಾವತಿ, ಸವಿತಾ ಹಂಚಿನಾಳ, ಲಕ್ಷ್ಮಿ, ಮಹಾದೇವಿ, ಸವಿತಾ ಪಾಟೀಲ್ ಹಾಗೂ ಟ್ರ್ಯಾಕ್ಟರ್ ಚಾಲಕ ಚಂದ್ರಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಎಸಗಿದ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.