ಹುಬ್ಬಳ್ಳಿ:ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾಗಿ ಸೇವೆಗೈದಿದ್ದ ದಕ್ಷ ಅಧಿಕಾರಿ ಬಿ.ಜಿ.ಕೊಕಟನೂರ್ (79) ಇವರು ಧಾರವಾಡದ ತಮ್ಮ ಸ್ವಗೃಹದಲ್ಲಿ ಕೊನೆ ಉಸಿರು ಎಳೆದಿದ್ದಾರೆ.
1998-99 ರಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಅವರು ತಮ್ಮ ಸೇವಾ ಅವಧಿಯಲ್ಲಿ ದಕ್ಷ ಅಧಿಕಾರಿ ಎಂಬ ಬಿರುದು ಪಡೆದುಕೊಂಡಿದ್ದರು.
ಮೃತರ ಅಂತ್ಯಕ್ರಿಯೆಯು ಅವರ ತವರೂರಾದ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ನಾಳೆ 27 ರಂದು ಮಧ್ಯಾಹ್ನ ನಡೆಯಲಿದ್ದು, ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ.
ಹು-ಧಾ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರು ಮೃತರ ಅಂತಿಮ ದರ್ಶನ ಪಡೆಯುವ ಸಾಧ್ಯತೆಯಿದ್ದು, ಹು-ಧಾ ಕಮೀಷನರೇಟ್ ಸಂತಾಪ ಸೂಚಿಸಿದೆ.