ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಶಾಂತವಾಗಿದ್ದ ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಹೌದು, ಕ್ಷುಲ್ಲಕ ವಿಚಾರಕ್ಕೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓರ್ವನಿಗೆ ಚಾಕು ಇರಿದು ಕೊಲೆ ಮಾಡಲಾಗಿದೆ.
ಶಿವು ಚಂದ್ರಶೇಖರ್ ಕಮ್ಮಾರ ಕೊಲೆಯಾದ ದುರ್ದೈವಿಯಾಗಿದ್ದು, ಸುದೀಪ್ ರಾಯಾಪುರ ಕೊಲೆ ಮಾಡಿದವನೆಂದು ತಿಳಿದುಬಂದಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಘಟನೆ ಗೊಪ್ಪನಕೊಪ್ಪ-ಸಂತೋಷ ನಗರದಲ್ಲಿ ನಡೆದಿದ್ದು, ಸ್ಥಳಕ್ಕೆ ಅಶೋಕನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ಆಗಮಿಸಿದ್ದಾರೆ.
ಇನ್ನೂ ಯಾವ ಕಾರಣಕ್ಕೆ ಕೊಲೆಯಾಗಿದೆ ಎಂಬ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.