ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ನವನಗರದ ಶಾಂತನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸಂಜನಾ ಕೇಳುಡಿ (17) ಎಂಬ ಬಾಲಕಿಯೇ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಬ್ಬಳ್ಳಿ ಕಿಮ್ಸ್ ಗೆ ಯುವತಿಯ ಮೃತ ದೇಹವನ್ನು ರವಾನೆ ಮಾಡಲಾಗಿದೆ.
ಬಾಲಕಿ ನೇಣಿಗೆ ಶರಣಾಗಿರುವ ಕುರಿತು ಮಾಹಿತಿ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯ ಬಳಿಕ ನಿಖರ ಮಾಹಿತಿ ತಿಳಿದು ಬರಬೇಕಿದೆ. ನವನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.