ಹುಬ್ಬಳ್ಳಿ: ಕಾರವೊಂದು ರೋಡ್ ಕ್ರಾಸಿಂಗ್ ಮಾಡುವ ವೇಳೆ ಸರಣಿ ಅಪಘಾತ ಸಂಭವಿಸಿದ ಘಟನೆ ಇಲ್ಲಿನ ಕುಸುಗಲ್ ಗ್ರಾಮದ ಹುಬ್ಬಳ್ಳಿ-ವಿಜಯಪುರ ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ರೋಡ್ ಕ್ರಾಸ್ ಮಾಡುವಾಗ ವೇಗವಾಗಿ ಕಾರ್ ಚಲಾಯಿಸಿ ಹೈವೆ ಮೇಲೆ ಬಂದ ಸಂದರ್ಭದಲ್ಲಿ ವಿಜಯಪುರದಿಂದ ಹುಬ್ಬಳ್ಳಿಗೆ ಹೊರಟಿದ್ದ ಗೂಡ್ಸ್ ವಾಹನ ಕಾರ್ ಗೆ ಡಿಕ್ಕಿ ಹೊಡೆದಿದ್ದು, ಗೂಡ್ಸ್ ವಾಹನ ಹಿಂಬದಿ ಇದ್ದ ಸಾರಿಗೆ ಬಸ್ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರ್ ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದ್ದು, ಕಾರ್ ಚಾಲಕ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಬಸ್ ಡ್ರೈವರ್ ಸೇರಿ ಕೆಲವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.