ಧಾರವಾಡ: ಸ್ಕೂಟಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಧಾರವಾಡದ ಸಾಧನಕೆರೆ ಬಳಿ ಶುಕ್ರವಾರ ನಡೆದಿದೆ.
ಮೃತಪಟ್ಟ ಮಹಿಳೆ ಸಂಪಿಗೆನಗರದ ನಿವಾಸಿ ಎಂದು ತಿಳಿದು ಬಂದಿದೆ. ಇಲ್ಲಿನ ಸಾಧನಕೆರೆ ಬಳಿ ಮೊಗದ ಗ್ರಾಮದಿಂದ ಬರುತ್ತಿದ್ದ ಸ್ಕೂಟಿ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಚಾಲಕ ಕುಡಿದ ಮತ್ತಿನಲ್ಲಿದ್ದ ಎನ್ನಲಾಗಿದೆ.

ಸ್ಕೂಟಿಯಲ್ಲಿದ್ದ ಮಹಿಳೆ ಸಾವನ್ನಪ್ಪಿದರೇ ಇನ್ನೋರ್ವ ಮಹಿಳೆ ಗಂಭೀರ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.