ಹುಬ್ಬಳ್ಳಿ:ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಇಲ್ಲಿನ ನಗರದ ಹೊರವಲಯದ ಗದಗ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದ್ದು, ಕೊಲೆ ಮಾಡಿದ ಆರೋಪಿತರನ್ನು ಆದಷ್ಟು ಬೇಗ ಬಂಧನ ಮಾಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದರು.

ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, 38 ವರ್ಷದ ಸ್ಯಾಮ್ಯೂಯಲ್ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು, ಈತ ಹಂದಿ ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಯಾದ ವ್ಯಕ್ತಿಯ ಪತ್ನಿಯಿಂದ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕೊಲೆ ಮಾಡಿದ ಆರೋಪಿತರು ಯಾರೆಂಬುದು ಗೊತ್ತಿದೆ ತನಿಖೆ ಮಾಡಿ ಬಂಧನ ಮಾಡಲಾಗುವುದು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಂಕಿತರನ್ನು ವಿಚಾರಣೆಗೆ ವಶಕ್ಕೆ ಪಡೆಯಲಾಗಿದೆ. ವೈಯಕ್ತಿಕ ಅಥವಾ ಹಣಕಾಸಿನ ವಿಚಾರವಾಗಿ ಸ್ಯಾಮುಯಲ್ ನನ್ನು ವ್ಯವಸ್ಥಿತವಾಗಿ ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆ. ಶೀಘ್ರವೇ ಆರೋಪಿಗಳನ್ನ ಬಂಧನ ಮಾಡಲಾಗುವುದು ಎಂದರು.
ಹುಧಾ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ಬಂದಿದೆ ಎಂದು ಗೃಹ ಸಚಿವರು ಹೆಮ್ನೆಯಿಂದ ಹೇಳಿದರೇ ಇತ್ತ ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ಅದೇ ರಾಗ ಅದೇ ಹಾಡು ಎಂಬಂತೆ ಅಪರಾಧ ಕೃತ್ಯಗಳು ಸದ್ದು ಮಾಡುತ್ತಿದ್ದು, ಕಾನೂನು ಸುವ್ಯವಸ್ಥೆ ಮತ್ತೆ ಹದೆಗೆಟ್ಟಿದೆಯಾ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.