ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೊರ್ವನ ಶವ ಕೊಳೆತ ಸ್ಥಿತಿಯಲ್ಲಿ ಅನುಮಾಸ್ಪ ರೀತಿಯಲ್ಲಿ ದೊರೆತಿರುವ ಘಟನೆ ಇಲ್ಲಿನ ನವನಗರದ ಎಪಿಎಂಸಿ ಮಾರುಕಟ್ಟೆ ಬಳಿಯಲ್ಲಿ ದೊರೆತಿದೆ.
ಮೃತ ದೇಹದ ದುರ್ವಾಸನೆ ಹೆಚ್ಚಾದ ಹಿನ್ನೆಲೆಯಲ್ಲಿ ಸ್ಥಳೀಯರು ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅದರಂತೆ ಸ್ಥಳಕ್ಕೆ ದೌಡಾಯಿಸಿದ ಎಪಿಎಂಸಿ ಪೊಲೀಸರು ಮೃತ ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇನ್ನು ಮೃತನು ಯಾರು? ಯಾವ ಕಾರಣಕ್ಕೆ ಮೃತನಾಗಿದ್ದಾನೆ? ಕೊಲೆಯೋ? ಆತ್ಮಹತ್ಯೆಯೋ? ಎಂಬ ಮಾಹಿತಿ ಇನ್ನಷ್ಟೇ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.