ಹುಬ್ಬಳ್ಳಿ: ಕಬ್ಬು ಕಟಾವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದು, ಮಹಿಳೆಯೋರ್ವಳು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಅನಸವ್ವಾ (40) ಕೊಲೆಯಾದ ಮಹಿಳೆಯಾಗಿದ್ದಾಳೆ. ಗಾಯಗೊಂಡಿರುವ ಸಚಿನ್ ಪಾಟೀಲ್, ಬಸವರಾಜ್, ಮೈಲಾರಪ್ಪ ಅವರನ್ನು ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಜಗಳ ಆರಂಭವಾಗಿ ಜಗಳ ಬಿಡಿಸಲು ಹೋಗಿದ್ದ ಅನಸವ್ವ ಕೊಲೆಯಾಗಿದ್ದಾಳೆ.
ಘಟನೆ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಿಮ್ಸ್ ಆಸ್ಪತ್ರೆಗೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಬರಮಣಿ ಅವರು ಬೇಟಿ ನೀಡಿ ಮಾಹಿತಿಯನ್ನು ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.