ಹುಬ್ಬಳ್ಳಿ: ಇಲ್ಲಿನ ಉಣಕಲ್’ನ ಈಶ್ವರ ದೇವಸ್ಥಾನದಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸ್ಪೋಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಮಾಲಾಧಾರಿ ಅಸುನೀಗಿದ್ದಾನೆ.

ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ.ತೇಜಸ್ವರ ಸಾತರೆ (26) ಸಾವನ್ನಪ್ಪಿದ ಮಾಲಾಧಾರಿಯಾಗಿದ್ದಾನೆ. ಸಿಲಿಂಡರ್ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದರು.ಆದರೆ ಚಿಕಿತ್ಸೆ ಫಲಿಸದೇ ಇಂದು ಸಂಜೆ ಮೃತಪಟ್ಟಿದ್ದಾರೆ.
ಕಿಮ್ಸ್ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಮಾಲಾಧಾರಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.