ಹುಬ್ಬಳ್ಳಿ: ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಸರ್ಕಾರ ಬಡ್ತಿ ನೀಡಿದೆ. ಸದ್ಯ ಕಮಿಷನರ್ ಹುದ್ದೆಯಿಂದ ಐಜಿಪಿ ದರ್ಜೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ಹು-ಧಾ ಪೊಲೀಸ್ ಆಯುಕ್ತರಾಗಿರುವ ಎನ್.ಶಶಿಕುಮಾರ್ ಅವರು, ಬಡ್ತಿ ಬಳಿಕವೂ ಅದೇ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.

2007 ಬ್ಯಾಚಿನ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿಯಾದ ಎನ್.ಶಶಿಕುಮಾರ್ ಅವರು ಅವರು 2024ರ ಜುಲೈನಲ್ಲಿ ಹು-ಧಾ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದರು. ಈ ಹಿಂದೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರು, ಮಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳನ್ನು ಎನ್.ಶಿಶಿಕುಮಾರ್ ಅವರು ಕಾರ್ಯ ನಿರ್ವಹಿಸಿದ್ದರು.