ಹುಬ್ಬಳ್ಳಿ: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿ ನಗರ ಕಾನೂನು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತರ ವರದಿಯನ್ನಾಧರಿಸಿ ರಾಜ್ಯ ಸರ್ಕಾರ ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ತಾತ್ಕಾಲಿಕವಾಗಿ ನಿಯೋಜಿಸಿ ವರ್ಗಾವಣೆ ಮಾಡುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ.

ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಈ ನಿಟ್ಟಿನಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರ ಅವರನ್ನು ಹುಧಾ ನಗರ ನಿಯಂತ್ರಣ ಕೊಠಡಿಗೆ ಹಾಗೂ ಹುಧಾ ಸಿಸಿಬಿ ನಗರ ಹೆಚ್ಚುವರಿ ಪ್ರಭಾರರಾದ ಅಲಿ ಎ ಶೇಖ್ ಅವರನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ತಾತ್ಕಾಲಿಕವಾಗಿ ಸರ್ಕಾರ ನಿಯೋಜನೆಗೊಳಿಸಿದೆ.
ಇತ್ತಿಚಿಗೆ ಹಳೇ ಹುಬ್ಬಳ್ಳಿಯ ವ್ಯಾಪ್ತಿಯಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ ಮಹತ್ವದ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.