ಹುಬ್ಬಳ್ಳಿ: ಶಾಸಕ ಪ್ರಸಾದ ಅಬ್ಬಯ್ಯ ಅವರ ಮೊಬೈಲ್ ಫೋನ್ಗೆ ಕರೆ ಮಾಡಿದ ವ್ಯಕ್ತಿಯೊಬ್ಬರು, ಶಾಸಕ ಹಾಗೂ ಅವರ ಅಂಗ ರಕ್ಷಕಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮಕಿ ಹಾಕಿದ್ದರ ಕುರಿತು ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಗ ರಕ್ಷಕ ಶ್ರೀಶೈಲ ಹಡಪದ ಕರ್ತವ್ಯದ ಮೇಲಿದ್ದರು. ಆಗ ಕರೆ ಮಾಡಿದ ಸುಧಾಕರ ಭವಾನಿಮಠ ಎಂಬಾತ ಶ್ರೀಶೈಲ ಹಾಗೂ ಶಾಸಕರಿಗೂ ಬೈದು, ಧಮಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಧಾಕರ ಭವಾನಿಮಠ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.