ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾದ ಘಟನೆ ನಗರದ ಹೊರವಲಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ.ಟ್ಯಾಂಕರ್ ಚಾಲಕ ಗಾಯಗೊಂಡಿದ್ದು, ಆತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಟ್ಯಾಂಕರ್ ನಲ್ಲಿ ಕೆಮಿಕಲ್ ಗ್ರೀಸ್ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದ್ದು, ಚಾಲಕನ ಬೇಜವಾಬ್ದಾರಿ ಹಾಗೂ ಅತಿಯಾದ ವೇಗದಿಂದಾಗಿ ಪಲ್ಟಿ ಹೊಡೆದಿದ್ದು ಈ ಅವಘಡಕ್ಕೆ ಕಾರಣವೆಂದು ತಿಳಿದು ಬಂದಿದೆ.
ಅಪಘಾತ ನಡೆದ ಸ್ಥಳದಲ್ಲಿ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು, ಕ್ರೇನ್ ಮೂಲಕ ಟ್ಯಾಂಕರ್ ತೆರವು ಕಾರ್ಯಾಚರಣೆಯನ್ನು ಡಿಸಿಪಿ ರವೀಶ್ ಮತ್ತು ಇತರೆ ಅಧಿಕಾರಿಗಳ ನೇತೃತ್ವದಲ್ಲಿ ನೆರವೇರಿಸಲಾಯಿತು.