ಹುಬ್ಬಳ್ಳಿ: ಪತ್ನಿ ಕಿರುಕುಳ ತಾಳಲಾರದೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗಾ ಆರೋಪಿಗಳನ್ನು ಪತ್ತೆ ಮಾಡಲಾಗುವುದು ಎಂದು ಡಿಸಿಪಿ ಮಹಾನಿಂಗ ನಂದಗಾವಿ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೀಟರ್ ಸಹೋದರ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಪೀಟರ್ ಪತ್ನಿ ಪಿಂಕಿ ಹಾಗೂ ಆಕೆಯ ಕುಟುಂಬಸ್ಥರ ವಿರುದ್ಧ ತನಿಖೆಯನ್ನು ಕೈಗೊಳ್ಳಲಾಗುವುದು ಎಂದರು.
ಭಾನುವಾರ ರಾತ್ರಿ ಪೀಟರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲಿ ಡೆತ್ ನೋಟ್ ಸಹ ಸಿಕ್ಕಿದ್ದು ಅದರ ಕುರಿತು ಹಾಗೂ ಕಿರುಕುಳ ವಿಚಾರವಾಗಿಯೂ ತನಿಖೆ ಮಾಡಲಾಗುವುದು. ಅಶೋಕನಗರ ಪೊಲೀಸ್ ಇನ್ಸ್ಪೆಕ್ಟರ್ ಅವರ ಮೂಲಕ ತನಿಖೆ ಕೈಗೊಂಡಿದ್ದು, ಆದಷ್ಟು ಬೇಗಾ ಆರೋಪಿಗಳನ್ನು ಪತ್ತೆ ಮಾಡಲಾಗುವುದು ಎಂದರು.