ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆ ಯುವಕನೋರ್ವ ಮನಬಂದಂತೆ ಬರ್ಬರವಾಗಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ ಘಟನೆ ಈಗಷ್ಟೇ ನಡೆದಿದೆ.

ನಗರದ ಉಣಕಲ್ ಹಾಗೂ ಲಿಂಗರಾಜ್ ನಗರ ರಸ್ತೆಯಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್ ಜಾಗದಲ್ಲಿ ಇಂದ್ರಪ್ರಸ್ಥ ನಗರ ನಿವಾಸಿ 24 ವರ್ಷದ ಆಕಾಶ್ ವಾಲ್ಮೀಕಿ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ.

ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ, ಕೊಲೆ ಮಾಡಿದ ಉದ್ದೇಶ ಏನು ಎಂಬ ಮಾಹಿತಿ ಪೊಲೀಸರ ತನಿಖೆ ನಂತರವಷ್ಟೇ ತಿಳಿದು ಬರಬೇಕಿದೆ.

ಘಟನಾ ಸ್ಥಳಕ್ಕೆ ಪೋಲಿಸ್ ಕಮಿಷನರ್ ಎನ್ ಶಶಿಕುಮಾರ, ಡಿಸಿಪಿ ಮಹಾನಿಂಗ ನಂದಗಾವಿ, ಎಸಿಪಿ ಶಿವಪ್ರಕಾಶ್ ನಾಯ್ಕ, ವಿದ್ಯಾನಗರ ಪೋಲಿಸ್ ಇನ್ಸ್ಪೆಕ್ಟರ್ ಜಯಂತ್ ಗೌಳಿ, ಕೇಶ್ವಾಪೂರ್ ಇನ್ಸ್ಪೆಕ್ಟರ್ ಹಟ್ಟಿ ಹಾಗೂ ಪೋಲಿಸ್ ಸಿಬ್ಬಂದಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.