ವಿಜಯಪುರ: ಭೀಮಾತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ್ ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಈ ಘಟನೆ ನಡೆದಿದೆ. ಬಾಗಪ್ಪನನ್ನು ಹಂತಕರು ಭೀಕರವಾಗಿ ಹತ್ಯೆಗೈದಿದ್ದಾರೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಫೈರಿಂಗ್ ನಡೆದಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಇದೀಗ ಹಂತಕರು ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.