ಭೀಮಾತೀರದ ನಟೋರಿಯಸ್ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣ ವಿಜಯಪುರ ಪೊಲೀಸರು ಬೇಧಿಸಿದ್ದಾರೆ. ಗಾಂಧಿಚೌಕ ಠಾಣೆ ಪೊಲೀಸರು ಕೇವಲ 24 ಗಂಟೆಯಲ್ಲಿ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಹೇಳಿಕೆಯಂತೆ ಇದೊಂದು ಸೇಡಿನ ಕೊಲೆ ಎಂದು ಹೇಳಲಾಗಿದೆ, ಆಸ್ತಿ ವಿಚಾರವಾಗಿ ರವಿ ಹಾಗೂ ಭಾಗಪ್ಪ ನಡುವೆ ಈ ಹಿಂದೆ ಗಲಾಟೆ ನಡೆದಿತ್ತು. ಇದೇ ಕಾರಣಕ್ಕಾಗಿ ಭಾಗಪ್ಪನ ಶಿಷ್ಯರು ರವಿಯನ್ನು ಈ ಹಿಂದೆ ಹತ್ಯೆ ಮಾಡಿದ್ದರು ಎನ್ನಲಾಗಿದೆ. ರವಿ ಹತ್ಯೆಗೆ ಪ್ರತಿಕಾರವಾಗಿ ಆತನ ತಮ್ಮ ಪ್ರಕಾಶ ಮೇಲಿನಕೇರಿ ಬಾಗಪ್ಪನನ್ನ ಹತ್ಯೆಗೈದು ಸೇಡು ತಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಬಂಧಿತರೆಲ್ಲರು ಗೆಳೆಯರು ಎಂದು ತಿಳಿದುಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್ಐ ರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.