ಹುಬ್ಬಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಜೂಜುಕೋರರ ಹಾವಳಿ ಹೆಚ್ಚಾಗಿದ್ದು ಅದನ್ನ ಮಟ್ಟ ಹಾಕಲು ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ್ ಚೆನ್ನಣ್ಣವರ ನೇತೃತ್ವದ ತಂಡ ಸನ್ನದ್ಧವಾಗಿದ್ದು, ಜೂಜಾಟವಾಡುತ್ತಿದ್ದ 8 ಜನರನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಬಂಧಿಸಿದ್ದಾರೆ.

ಬಂಧಿತ ಜೂಜುಕೋರರಿಂದ 62000 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಜೂಜುಕೋರರನ್ನು ಪಿಎಸ್ಐ ಸಚಿನ್ ಮತ್ತು ಸಿಬ್ಬಂದಿಗಳ ಕಾರ್ಯಾಚರಣೆಯಿಂದ ಪ್ರಕರಣವನ್ನು ಭೇದಿಸಿದ್ದಾರೆ. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಟ್ಟಿನಲ್ಲಿ ಹುಬ್ಬಳ್ಳಿ ಗ್ರಾಮೀಣ ಪ್ರದೇಶದಲ್ಲಿ ಜೂಜುಕೋರರ ಹಾವಳಿಯಿಂದಾಗಿ ಜನತೆ ಬೇಸತ್ತು ಹೋಗಿದ್ದು, ಗ್ರಾಮೀಣ ಠಾಣೆಯ ಪೊಲೀಸ್ ಬೀಟ್ ಮೂಲಕ ಎಚ್ಚರಿಸಿ ಕಡಿವಾಣ ಹಾಕಬೇಕಿದೆ ಎಂಬುದು ಸಾರ್ವಜನಿಕರ ಮನವಿಯಾಗಿದೆ.