ಹುಬ್ಬಳ್ಳಿ ಧಾರವಾಡ: ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ಗುರುತಿಸಿ ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕಗಳನ್ನು ಘೋಷಿಸಿದೆ. ಧಾರವಾಡ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಸೇರಿ ನಾಲ್ವರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಇನ್ಸ್ಪೆಕ್ಟರ್ ಕಾರೆಪ್ಪ ಶಿವಪ್ಪ ಹಟ್ಟಿ, ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ದಿಡಿಗಿನಾಳ, ಜಿಲ್ಲಾ ಡಿಎಆರ್ ವಿಭಾಗದ ಎಎಚ್‌ಸಿ ಯಲ್ಲಪ್ಪ ಎಂ. ಕಡೇಮನಿ ಹಾಗೂ ರಾಜ್ಯ ಗುಪ್ತ ವಾರ್ತೆಯ ಹಿರಿಯ ಗುಪ್ತಚರ ಸಹಾಯಕ ಉಮೇಶ ವೈ. ಮಡಿವಾಳರ ಮುಖ್ಯಮಂತ್ರಿ ಪದಕ ಗಿಟ್ಟಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ ಪೋಲಿಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕರ್ನಾಟಕ ಪಬ್ಲಿಕ್ ವಾಯ್ಸ್ ನ್ಯೂಸ್ ವತಿಯಿಂದ ಅಭಿನಂದನೆಗಳು. ಇವರ ಈ ಸಾಮಾಜಿಕ ಕಾರ್ಯ, ಕಳಕಳಿ ಉತ್ತಮ ಸೇವೆ ಹೀಗೆಯೇ ಮುಂದುವರೆಯಲಿ.