ಹುಬ್ಬಳ್ಳಿ/ಅಂಕೋಲಾ: ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರು ಮೂಲದ ದರೋಡೆಕೋರರ ಕಾಲಿಗೆ ಪೊಲೀಸರು ಗುಂಡೇಟು ನೀಡಿರುವ ಘಟನೆ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ನೌಪಾಲ್ ಹಾಗೂ ತಲ್ಲತ ಎಂಬ ದರೋಡೆಕೋರರು ಮಂಗಳೂರು ಮೂಲದ ಆರೋಪಿಗಳಾಗಿದ್ದಾರೆ.
ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದರೋಡೆ ಮಾಡಿದ ಪ್ರಕರಣದಡಿಯಲ್ಲಿ ದರೋಡೆಕೋರರು ಮುಂಬೈನಲ್ಲಿ ತಲೆಮರೆಸಿಕೊಂಡಿರುತ್ತಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸ್ ಮುಂಬೈನಿಂದ ಆರೋಪಿಗಳನ್ನು ಬಂಧಿಸಿ ಯಲ್ಲಾಪುರ ಮಾರ್ಗವಾಗಿ ಅಂಕೋಲಾ ಪೊಲೀಸ್ ಠಾಣೆಗೆ ಕರೆದೊಯ್ಯುವ ಸಂದರ್ಭದಲ್ಲಿ ವಾಹನ ನಿಲ್ಲಿಸಿ ಓಡಿ ಹೋಗುವ ವೇಳೆ ಓರ್ವ ಪಿಎಸ್ಐ ಹಾಗೂ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ.
ಅವರನ್ನು ತಡೆಯಲು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದರೂ ಕೂಡಾ ಹಲ್ಲೆ ಮಾಡಲು ಮುಂದಾದಾಗ ಆತ್ಮರಕ್ಷಣೆಗಾಗಿ ಪೊಲೀಸರು ದರೋಡೆಕೋರರ ಕಾಲಿಗೆ ಗುಂಡು ಹಾರಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಹಳಿಯಾಳ ಠಾಣೆಯ ಇನ್ಸ್ಪೆಕ್ಟರ್ ಚಂದ್ರಶೇಖರ ಮಠಪತಿ, ಪಿಎಸ್ಐ ಪರಶುರಾಮ ಬಿ. ನೇತೃತ್ವದ ತಂಡ ಆರೋಪಿಗಳನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನೂ ಹಲ್ಲೆಗೊಳಗಾದ ಆರೋಪಿಗಳನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.