ಧಾರವಾಡ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿ.ಇ.ಎನ್ ಪೊಲೀಸರು ದಾಳಿ ಮಾಡಿ ಅಪಾರ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಧಾರವಾಡದ ಮದರಮಡ್ಡಿ ಹನುಮಂತದೇವರ ಗುಡಿ ಓಣಿಯ ಹತ್ತಿರ ಪೊಲೀಸರು ದಾಳಿ ಮಾಡಿದ ವೇಳೆ ಆರೋಪಿತರು ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ನಗರದ ಕಾಮನಕಟ್ಟಿ ಗೌಡರ ಓಣಿಯ ವಜಾದ ಅಲಿ ರಾವುತ (29) ಹಾಗೂ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ದಾಳಿ ವೇಳೆ 1.79 ಲಕ್ಷ ರೂ ಮೌಲ್ಯದ 1 ಕೆಜಿ 790 ಗ್ರಾಂ ತೂಕದ ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಈ ಕುರಿತು ಸಿ.ಇ.ಎನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಗಳ ಪತ್ತೆಗೆ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ ತಂಡ ಬಲೆ ಬಿಸಿದೆ.