ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮಂಜುನಾಥ ಕಾಟಕರಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಂಜುನಾಥ ಅವರನ್ನು ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ಅವರ ಆರೋಗ್ಯ ಸ್ಥಿರವಾಗಿದ್ದು, ಗುಣಮುಖರಾಗುತ್ತಿದ್ದಾರೆ ಎಂಬ ಮಾಹಿತಿಯಿದೆ.
ಈ ವಿಷಯ ತಿಳಿದ ತಕ್ಷಣ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಮಂಜುನಾಥ ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.ಆಸ್ಪತ್ರೆ ಮೂಲಗಳಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.