ತಡಸ: ವಾಹನ ಚಾಲನೆ ಮಾಡುವಾಗ ಏಕಾಏಕಿ ಹೃದಯಾಘಾತ ಸಂಭವಿಸಿ ರಸ್ತೆಯ ಪಕ್ಕದ ಡಿವೈಡರ್\’ಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಪುಣಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿ ಜರುಗಿದೆ.
ಮಂಜು ಮಾರಣ್ಣವರ್ (30) ಮೃತ ದುರ್ದೈವಿಯಾಗಿದ್ದು, ಈತ ಹುಬ್ಬಳ್ಳಿಯ ಸುತಗಟ್ಟಿ ಗ್ರಾಮದ ನಿವಾಸಿಯಾಗಿದ್ದಾನೆ. ಎಂದಿನಂತೆ ಕೆಲಸಕ್ಕೆ ಹೋದ ಸಮಯದಲ್ಲಿ ತಡಸ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಅವಘಡ ಸಂಭವಿಸಿದೆ.