ಅಪರಾಧ ನಿಯಂತ್ರಣ ದಳದ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರದ ಸಾಂಗ್ಲಿಯಿಂದ ಕರ್ನಾಟಕದ ಹುಬ್ಬಳ್ಳಿಗೆ ತೆರಳುತ್ತಿದ್ದ ಸರಕು ಸಾಗಣೆ ವಾಹನದಲ್ಲಿ ಲೆಕ್ಕಕ್ಕೆ ಸಿಗದ 2.73 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು, ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಸಾಂಗ್ಲಿಯ ಸಚಿನ್ ಮೇಣಕುದೂರ ಮತ್ತು ಮಾರುತಿ ಮರಗುಡ್ಡೆ ಎಂಬಿಬ್ಬರನ್ನು ಬಂಧಿಸಲಾಗಿದೆ.
ನಗದು ಸಾಗಿಸಲು ಸರಕು ವಾಹನದ ಕ್ಯಾಬಿನ್ ಅನ್ನು ಮಾರ್ಪಡಿಸಲಾಗಿದೆ. ಡಿಸಿಪಿ ರೋಹನ್ ಜಗದೀಶ್ ಪ್ರಕಾರ ವಶಪಡಿಸಿಕೊಂಡ ಹಣದ ಮೂಲದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.