ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೋಲಿಸರು ಕಾರ್ಯಾಚರಣೆ ಮಾಡಿ ಇಬ್ಬರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಸಿಬಿ ಎಸಿಪಿ ಒಡೆಯರ್ ಅವರ ನೇತೃತ್ವದಲ್ಲಿ ಕಮರಿಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿನ ಕೌಲಪೇಟೆಯಲ್ಲಿ ಗಾಂಜಾ ಮಾರಾಟ ಮಾಡಿತ್ತಿದ್ದ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ದಾಳಿ ಮಾಡಿದ ಸಿಸಿಬಿ ತಂಡ ಆಸೀಪ್ ಮತ್ತು ಫಯಾಜ್ ಬಳ್ಳಾರಿ ಎಂಬಾತರನ್ನು ಬಂಧಿಸಿದ್ದಾರೆ. ಇವರಿಂದ 250 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಸಿದ್ದಾರೆ.
ಸದ್ಯ ಈ ಕುರಿತು ಕಮರಿಪೇಟೆ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕಾರ್ಯಾಚರಣೆಯಲ್ಲಿ ಸಿಪಿಐ ಅಲಿ ಶೇಖ್, ಮಾರುತಿ ಗುಳ್ಳಾರಿ, ಮಾರುತಿ ಭಜಂತ್ರಿ, ಐ.ಕೆ.ಧಾರವಾಡ, ಬಾಬಾಜಾನ್ ಲಂಗೋಟಿ, ಬಸವರಾಜ ಬೆಳಗಾವಿ ಸೇರಿದಂತೆ ಇನ್ನಿತರರು ಇದ್ದರು.