ಹುಬ್ಬಳ್ಳಿ: ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಣೆ ಮಾಡಿರುವ ಘಟನೆ ನವನಗರದಲ್ಲಿ ನಡೆದಿದೆ
ವಾಟ್ಸ್ ಆ್ಯಪ್ ಹಾಗೂ ಕಾಲ್ ಮಾಡುವ ಮೂಲಕ ಹೊಸ ಹೊಸ ಹುಡುಗಿಯರ ಫೋಟೋ ಕಳಿಸುವ ಮೂಲಕ ಗಿರಾಕಿಗಳನ್ನು ಕರೆಸಿ ವೇಶ್ಯಾವಾಟಿಕೆ ಧಂದೆ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಅಲಿ ಶೇಖ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇನ್ನು ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಈ ಕುರಿತು ನವನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.