ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ವಾಹನವೊಂದು ಕಾರಿನ ಮೇಲೆ ಮುಗ್ಗರಿಸಿ ಬಿದ್ದ ಪರಿಣಾಮ ಇಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಕ್ರಾಸ್ ಬಳಿಯಲ್ಲಿ ನಡೆದಿದೆ.
ಮುಮ್ಮಿಗಟ್ಟಿ ಕ್ರಾಸ್ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರಿನ ಮೇಲೆ ಮುಗ್ಗರಿಸಿದ್ದು, ಸಂಭವಿಸಬಹುದಾದ ಅವಘಡವೊಂದು ತಪ್ಪಿದಂತಾಗಿದೆ.
ಕಾರಿನಲ್ಲಿದ್ದ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಕುರಿತಂತೆ ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.