ಹುಬ್ಬಳ್ಳಿ: ವಾಣಿಜ್ಯ ನಗರದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವವರ ಮೇಲೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಜನಸಾಮಾನ್ಯರಿಗೆ ತೊಂದರೆ ಕೊಡುವ ರೌಡಿಗಳ ಗಡಿಪಾರು ಮಾಡಲಾಗಿದೆಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಹೇಳಿದರು.
ಈಗಾಗಲೇ ಹಲವು ರೌಡಿಗಳನ್ನು ಗಡಿಪಾರು ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ನಾಲ್ವರನ್ನು ಗಡಿಪಾರು ಮಾಡಿದ್ದೇವೆ. ಕಳೆದ ವರ್ಷ 24 ಜನರಿಗೆ ಗಡಿಪಾರು ಮಾಡಲಾಗಿತ್ತು. ಈ ವರ್ಷ 1500 ರೌಡಿಶೀಟರ್ ಗಳಿಂದ ಬಾಂಡ್ ಬರೆಸಿಕೊಳ್ಳಲಾಗಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಅವಳಿ ನಗರದಲ್ಲಿ ಅಪರಾಧ ಕೃತ್ಯಗಳ ಮೇಲೆ ಕಡಿವಾಣ ಹಾಕಲು ರೌಡಿಶೀಟರ್ ಗಳ ಗಡಿಪಾರು ಮತ್ತು ಮುಚ್ಚಳಿಕೆ ಪತ್ರ ಬರೆಸಿಕೊಳ್ಳುವ ಇತ್ಯಾದಿ ಪ್ರಕ್ರಿಯೆ ನಡೆಸಲಾಗಿದೆ ಎಂದರು.