ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಮನೆ ಕಳ್ಳತನ ಹಾಗೂ ಇನ್ನಿತರ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸರೊಂದಿಗೆ ಸಾರ್ವಜನಿಕರು ಕೈ ಜೋಡುಸುವಂತೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಆದೇಶದ ಮೇರೆಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಧಾರವಾಡ ಉಪನಗರ ಠಾಣೆಯ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಆಟೋ ರಿಕ್ಷಾಗಳ ಮೂಲಕ \”ಜನಜಾಗೃತಿ ಅಭಿಯಾನ\”ವನ್ನು ಹಮ್ಮಿಕೊಂಡಿದ್ದಾರೆ.
ಪೊಲೀಸರು ಕೈಗೊಂಡಿರುವ ಈ ಕಾರ್ಯಕ್ಕೆ ಸಾರ್ವಜನಿಕರು ಎಲ್ಲಡೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಹೆಜ್ಜೆಯನ್ನು ಮುಂದಿಟ್ಟಿರುವ ಉಪನಗರ ಪೊಲೀಸರು ಸಾರ್ವಜನಿಕರ ಭದ್ರತೆಯ ಹಿತದೃಷ್ಟಿಯಿಂದ ಉಪಯುಕ್ತ ಸಲಹೆ ಸೂಚನೆಗಳನ್ನೊಳಗೊಂಡ ಕರಪತ್ರಗಳನ್ನು ಸಿದ್ದಪಡಿಸಿ ದಿನ ಪತ್ರಿಕಾ ವಿತರಕರ ಮೂಲಕ ಸುಮಾರು ಹತ್ತು ಸಾವಿರ ಮನೆಗಳಿಗೆ ಕರಪತ್ರಗಳನ್ನು ತಲಪಿಸುವ ಉದ್ದೇಶ ಹೊಂದಿರುವ ಈ ವಿನೂತನ ಯೋಜನೆಗೆ ಇಂದು ಬೆಳಗಿನ ಜಾವ ಉಪನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ದಯಾನಂದ ಶೇಗುಣಸಿ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಪಿಎಸ್ಐ ಉಮೇಶಗೌಡ ಪಾಟೀಲ್ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳು ಪತ್ರಿಕಾ ವಿತರಕರು ಹಾಜರಿದ್ದರು…