ಹುಬ್ಬಳ್ಳಿ: ಶಿಶುನಾಳ ಜಾತ್ರೆಗೆ ಹೋಗುತ್ತಿದ್ದ ಭಕ್ತರ ವಾಹನವೊಂದು ಅಪಘಾತವಾಗಿ ಓರ್ವ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿಯಲ್ಲಿ ನಡೆದಿದೆ.
ಚೆನ್ನಾಪುರ ಗ್ರಾಮದಿಂದ ಆರು ಜನರು ಆಟೋದಲ್ಲಿ ಶಿಶುನಾಳ ಶರೀಫರ ಜಾತ್ರೆಗೆ ಹೋಗುತ್ತಿದ್ದಾಗ ಕಂಟೇನರ್ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಆಟೋದಲ್ಲಿದ್ದ 6 ಜನರ ಪೈಕಿ ಈರಪ್ಪ ನಾಡೂರು ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಉಳಿದ ಐದು ಜನರಲ್ಲಿ 10-12 ವರ್ಷದ ಇಬ್ಬರು ಮಕ್ಕಳು, 30-40 ವರ್ಷದ 3 ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಇವರ ಹೆಸರು ತಿಳಿದುಬಂದಿಲ್ಲ.
ಸ್ಥಳಕ್ಕೆ ಗ್ರಾಮೀಣ ಠಾಣೆಯ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಈ ಘಟನೆ ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.