ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಇಎಸ್ಐ ಆಸ್ಪತ್ರೆ ಬಳಿಯ ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ನಡೆದಿದೆ.
ಬೈಕ್ ಸವಾರ ಹರೀಶ್ ಪೊಂಗಲ್ (21) ಮೃತ ಯುವಕ. ಹುಬ್ಬಳ್ಳಿಯಿಂದ ಕಲಘಟಗಿ ಕಡೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಅದರ ಪಕ್ಕದಲ್ಲೇ ಹೊರಟಿದ್ದ ಕಾರನ್ನು ಓವರ್ ಟೇಕ್ ಮಾಡಲು ಹೋಗಿ, ನಿಯಂತ್ರಣ ತಪ್ಪಿ ಬಸ್ಸಿನ ಹಿಂಬಾಗದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಬೈಕ್ ಸವಾರ ಕೊನೆಯುಸಿರೆಳೆದಿದ್ದಾನೆ.
ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.