ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನವನಗರ ಠಾಣೆಯ ಪೊಲೀಸರು ರೌಡಿಗಳ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು.
ರೌಡಿಗಳ ಸಂಚಾರ, ದಿನಚರಿ ಹಾಗೂ ಕುಟುಂಬಸ್ಥರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದರು. ಪೋಲಿಸ್ ಸಿಬ್ಬಂದಿಗಳ ಒಳಗೊಂಡ ತಂಡ ಮನೆಗಳಲ್ಲಿ ತಪಾಸಣೆ ನಡೆಸಿದರು. ರೌಡಿಗಳ ಸಹಿ ಪಡೆದುಕೊಂಡು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ತಾಕೀತು ಮಾಡಿದರು.
\’ಠಾಣೆಯ ರೌಡಿ ಪಟ್ಟಿಯಲ್ಲಿ ಹೆಸರು ಇರುವ ಪ್ರತಿಯೊಬ್ಬರ ಮನೆಗೂ ಹೋಗಿ ಪರಿಶೀಲಿಸಲಾಗಿದೆ. ಮುಂದಿನ ದಿನಗಳಲ್ಲೂ ಅವರ ಮೇಲೆ ನಿಗಾ ಇರಿಸಲಾಗುವುದು’ ಎಂದು ನವನಗರ ಠಾಣೆಯ ಇನ್ಸ್ಪೆಕ್ಟರ್ ಸಮಿವುಲ್ಲಾ ಅವರು ಹೇಳಿದರು.